Gruha Lakshmi Scheme Karnataka PDF In Kannada

‘ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ, ಅರ್ಜಿಯಲ್ಲೇನಿದೆ’ PDF Quick download link is given at the bottom of this article. You can see the PDF demo, size of the PDF, page numbers, and direct download Free PDF of ‘ Gruha Lakshmi Scheme Karnataka’ using the download button.

Gruha Lakshmi Scheme Karnataka PDF Free Download

ಬೆಂಗಳೂರು

ಕಾಂಗ್ರೆಸ್‌ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಯ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ.

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ಮುಂದಾಗಿತ್ತು. ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು. ಸದ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಗೃಹಲಕ್ಷ್ಮೀ ಅರ್ಜಿ ಸಲ್ಲಿಸುವುದೇಕೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ತಪ್ಪು ಮಾಹಿತಿ ನೀಡಿದರೆ ಸೂಕ್ತ ಕ್ರಮ ಎಚ್ಚರಿಕೆ

ಯೋಜನೆಗೆ ಅರ್ಜಿ ಸಲ್ಲಿಸುವರಿಗೆ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುತ್ತದೆ. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನ ಮಾಗುತ್ತದೆ. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ. ಜತೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಾಡಿಗೆದಾರರಿಗೆ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್‌ ಇಲ್ಲಎಂದು ಮಾರ್ಗಸೂಚಿಯಲ್ಲಿಹೇಳಿದ್ದ ಸರಕಾರ, ತೀವ್ರ ಆಕ್ರೋಶದ ಬಳಿಕ ಆದೇಶವನ್ನು ಪರಿಷ್ಕರಿಸಿತ್ತು. ಈಗ ‘ಗೃಹ ಲಕ್ಷ್ಮಿ’ ಗ್ಯಾರಂಟಿಯಲ್ಲೂಷರತ್ತುಗಳ ಮೂಲಕ ಜನತೆಗೆ ಸರಕಾರ ಶಾಕ್‌ ನೀಡಿದೆ.

ಏನಿದು ಗೃಹಲಕ್ಷ್ಮಿ ಯೋಜನೆ?


ಇದು ರಾಜ್ಯದ ಮಹಿಳೆಯರಿಗಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಪ್ರಮುಖ ಯೋಜನೆಗಳಲ್ಲಿ ಒಂದು. ಪ್ರತಿ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಿಕ ಧನ ನೀಡುವ ಯೋಜನೆ ಇದಾಗಿದೆ.

ಜೂನ್ 15ರಿಂದಲೇ ಅರ್ಜಿ ಸ್ವೀಕಾರ

  • ಇದೇ ಜೂನ್ 15, ಗುರುವಾರದಿಂದಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಪಡೆಯಲಾಗುತ್ತದೆ.
  • ಜೂನ್ ಗುರುವಾರದಿಂದ 15ರಿಂದ ಜುಲೈ 15, ಶನಿವಾರದವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಜುಲೈ 16ರಿಂದ ಆಗಸ್ಟ್ 14ರವರೆಗೆ ಅರ್ಜಿಗಳನ್ನು ಪರಿಶೀಲಿಸಲಾಗುತ್ತದೆ.
  • ಆನ್‌ ಲೈನ್‌ ಹಾಗೂ ಆಫ್‌ ಲೈನ್ ಎರಡೂ ಕಡೆ ಅರ್ಹರು ಅರ್ಜಿ ಸಲ್ಲಿಸಬಹುದು.
  • ಆಗಸ್ಟ್ 15, ಮಂಗಳವಾರದಂದು ಸ್ವಾತಂತ್ರ್ಯ ದಿನಾಚರಣೆ ದಿನದಿಂದಲೇ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ ಹಣ ಜಮಾ ಮಾಡಲಾಗುತ್ತದೆ.


2 ಸಾವಿರ ರೂಪಾಯಿ ಯಾರೆಲ್ಲ ಪಡೆಯಬಹುದು?

  • ಪ್ರತಿ ಮನೆಯ ಯಜಮಾನಿ ಗೃಹಲಕ್ಷ್ಮಿ ಯೋಜನೆ ಅಡಿ 2 ಸಾವಿರ ರೂಪಾಯಿ ಪಡೆಯಬಹುದು
  • ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಸ್ತ್ರೀಯರು ಅರ್ಜಿ ಸಲ್ಲಿಸಬಹುದು
  • ವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರು ಹಾಗೂ ನಿರ್ಗತಿಕ ಮಹಿಳೆಯರು ಅರ್ಜಿ ಸಲ್ಲಿಸಬಹುದು.
  • ಲೈಂಗಿಕ ಅಲ್ಪಸಂಖ್ಯಾತರೂ ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
  • ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಡೀಟೆಲ್ಸ್ ನೀಡಬೇಕು

2 ಸಾವಿರ ರೂಪಾಯಿ ಅತ್ತೆಗೋ? ಸೊಸೆಗೋ?


ಈ ವಿಚಾರದ ಬಗ್ಗೆ ಸಾರ್ವಜನಿಕರು ಬಹಳ ಗೊಂದಲಕ್ಕೆ ಒಳಗಾಗಿದ್ದರು. ಗೃಹಲಕ್ಷ್ಮಿ ಯೋಜನೆಯಡಿ ಸಿಗುವ 2 ಸಾವಿರ ರೂಪಾಯಿ ಅತ್ತೆಗೆ ಸಿಗುತ್ತಾ? ಅಥವಾ ಸೊಸೆಗೆ ಸಿಗುತ್ತಾ ಎನ್ನುವ ಬಗ್ಗೆ ಚರ್ಚೆ ಶುರುವಾಗಿತ್ತು. ಆದರೆ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಅತ್ತೆಯಾದರೂ ಓಕೆ, ಸೊಸೆಯಾದರೂ ಓಕೆ. ಎಪಿಎಲ್‌ ಅಥವಾ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಮನೆಯ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅತ್ತೆ ಖಾತೆಗೆ ಹಣ ಸೇರಬೇಕೋ ಅಥವಾ ಸೊಸೆ ಖಾತೆಗೆ ಹಣ ಸೇರಬೇಕೋ ಎನ್ನುವುದನ್ನು ಆ ಕುಟುಂಬಸ್ಥರೇ ನಿರ್ಧಾರ ಮಾಡಿ, ಸರ್ಕಾರಕ್ಕೆ ಮಾಹಿತಿ ನೀಡಬೇಕು ಅಂತ ಹೇಳಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಆನ್ ಲೈನ್ ಅಥವಾ ಆಫ್‌ ಲೈನ್ ಎರಡೂ ವಿಧಾನದಿಂದ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಬಹುದು.
  • ಮನೆಯಲ್ಲಿ ಅತ್ತೆ ಅಥವಾ ಸೊಸೆ ಇಬ್ಬರಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಮನೆ ಯಜಮಾನಿ ಕೆಲವು ಅಗತ್ಯ ಮಾಹಿತಿಗಳನ್ನು ಕಡ್ಡಾಯವಾಗಿ ನೀಡಬೇಕು.
  • ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ನಂಬರ್, ಬ್ಯಾಂಕ್ ಪಾಸ್‌ಬುಕ್‌ಗಳನ್ನು ಅರ್ಜಿ ಜೊತೆ ಸಲ್ಲಿಸಬೇಕು
  • ಕುಟುಂಬದ ಎಪಿಎಲ್‌ ಅಥವಾ ಬಿಪಿಎಲ್‌ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಅರ್ಜಿ ಜೊತೆ ಲಗತ್ತಿಸಬೇಕು.
  • ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳು, ಅರ್ಜಿ ಪ್ರಕ್ರಿಯೆ ಮತ್ತು ಇತರ ಮಾಹಿತಿಯನ್ನು ಕರ್ನಾಟಕ ಸರ್ಕಾರವು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
Language Kannada
No. of Pages3
PDF Size0.07 MB
CategoryGeneral
Source/Credits

Related PDFs

Speedy Current Affairs 2023 PDF

Famous Classical Dancers Of India PDF

List Of Important Battles (Wars) In Indian History PDF

ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ, ಅರ್ಜಿಯಲ್ಲೇನಿದೆ – Gruha Lakshmi Scheme Karnataka PDF Free Download

Leave a Comment

Your email address will not be published. Required fields are marked *

error: Content is protected !!